Kundapra.com ಕುಂದಾಪ್ರ ಡಾಟ್ ಕಾಂ

ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ಕ್ರೀಡೆ ದೈಹಿಕ ಮಾನಸಿಕ  ಸ್ವಾಸ್ಥ ಕಾಪಾಡಿಕೊಳ್ಳುವಲ್ಲಿ ಸಹಕಾರಿ. ಎಲ್ಲರೂ ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕೀರ್ತಿ ಪಡೆಯಿರಿ, ಜನತಾ ವಿದ್ಯಾ ಸಂಸ್ಥೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದ ವಿದ್ಯಾರ್ಥಿ ಪ್ರತಿಭೆಗಳಿದ್ದಾರೆ. ಪ್ರತಿಭೆಗಳಿಗೆ ಸೂಕ್ತ ವೇದಿಕೆ ಜನತಾ ಸಂಸ್ಥೆಯಲ್ಲಿ ದೊರಕುತ್ತಿದೆ ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಹೆಗ್ಡೆ ಹೇಳಿದರು.

ಅವರು ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ ಕಾರ್ಯಕ್ರಮದ ಧ್ವಜಾರೋಹಣ ಗೈದು ಶುಭ ಹಾರೈಸಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆ  ಹೆರಂಜಾಲು ಇಲ್ಲಿಯ ಪ್ರಾಂಶುಪಾಲರಾದ ಕಮಲಾ ಕೆ.ವಿ. ಮಾತನಾಡಿ, ಕ್ರೀಡಾ ಉತ್ಸವ ನಮ್ಮ ಜೀವನಕ್ಕೆ ಜೀವನೋತ್ಸಾಹ ತಂದು ಕೊಡುತ್ತದೆ.ಎಲ್ಲ ರಂಗದಲ್ಲೂ ಸಿಕ್ಕಿರುವ ಅವಕಾಶ ಉಪಯೋಗಿಸಿಕೊಳ್ಳಿ. ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲ್ಲಿ ಕ್ರೀಡೆಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜನತಾ ಪ್ರೌಢ ಶಾಲೆಯ ಶಿಕ್ಷಕರಾದ ವಿಠ್ಠಲ್ ನಾಯಕ್, ಕಾಲೇಜಿನ ಉಪ ಪ್ರಾoಶುಪಾಲ ರಮೇಶ್ ಪೂಜಾರಿ ಉಪಸ್ಥಿತರಿದ್ದರು. ಉಪನ್ಯಾಸಕರಾದ ಅಲ್ತಾರು ನಾಗರಾಜ್ ಸ್ವಾಗತಿಸಿ, ಉದಯ ನಾಯ್ಕ ಕಾರ್ಯಕ್ರಮ ನಿರೂಪಿಸಿ, ಅಭಿಜಿತ್ ವಂದಿಸಿದರು.

Exit mobile version