Site icon Kundapra.com ಕುಂದಾಪ್ರ ಡಾಟ್ ಕಾಂ

ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ನಿಹಾರಿಕಾ ದೇವಾಡಿಗ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು
: ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ 2025 ಇದರ ಅಂಗವಾಗಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಆರ್. ದೇವಾಡಿಗ ಅವರು ಪ್ರಾಥಮಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹೆಮ್ಮೆ ತಂದಿರುತ್ತಾರೆ.

ಸಾಂಸ್ಕೃತಿಕ, ಧಾರ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರೂ, ನಿಹಾರಿಕಾ ತೋರಿದ ಸ್ಪಷ್ಟಪಾಠ, ಸ್ವರಮಾಧುರ್ಯ ಮತ್ತು ಗೀತಾ ಶ್ಲೋಕಗಳ ಶುದ್ಧಉಚ್ಚಾರಣೆ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಈಕೆ ಬೈಂದೂರು ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರವೀಂದ್ರ ದೇವಾಡಿಗ ಹಾಗೂ ಶಿಕ್ಷಕಿಯಾದ ರವಿಕಲಾ ದೇವಾಡಿಗ ದಂಪತಿಯ ಪುತ್ರಿ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು,  ಶಿಕ್ಷಕವೃಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Exit mobile version