Site icon Kundapra.com ಕುಂದಾಪ್ರ ಡಾಟ್ ಕಾಂ

ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಶ್ರಿಯಾ ಕೆ. ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರಿಯಾ ಕೆ. ನೂತನ ಮೈಲಿಗಲ್ಲು ಸಾಧಿಸಿ, ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಗೊಂಡಿರುತ್ತಾಳೆ.

ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ ಅವರು ಈ ಕಂಠಪಾಠ ಸ್ಪರ್ಧೆಯನ್ನು ಆಯೋಜಿಸಿದ್ದರು.

ಈ ಸ್ಪರ್ಧೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದ  ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ ಮತ್ತು ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಅಭಿನಂದನೆಗಳನ್ನು ಸಲ್ಲಿಸಿದರು. ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜು ಮತ್ತು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಶಿಕ್ಷಕ ಶಿಕ್ಷಕಕೇತರ ವೃಂದದವರು ವಿದ್ಯಾರ್ಥಿನಿಯ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Exit mobile version