Kundapra.com ಕುಂದಾಪ್ರ ಡಾಟ್ ಕಾಂ

ಹೆಸಕುತ್ತೂರು ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಹಬ್ಬದ ಸಡಗರ – ’ಸಿಂಗಾರ’

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ
: ಮಕ್ಕಳು ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಬೆಳೆಯಬೇಕು. ಅಂತಹ ಸಾಧಕ ಮಕ್ಕಳನ್ನು ಅತಿಥಿಗಳಾಗಿ ಮಾಡಿ. ಮಕ್ಕಳ ಹಬ್ಬ ಮಾಡಿದಾಗ ಇತರೆ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ನುಡಿದರು.

ಅವರು ಹೆಸಕುತ್ತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಹಬ್ಬದ ಸಡಗರ ಸಿಂಗಾರದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಕಾಂತಾರ ಚಾಪ್ಟರ್ 1 ಸಿನಿಮಾದ ಬಾಲನಟಿ ಸಮೀಕ್ಷ ಸುರೇಶ ಹಕ್ಲಾಡಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ನಾಯಕಿ ಆರಾಧನಾ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಲಾ ಉಪ ನಾಯಕ ಅದ್ವಿತ್ ವಿ. ಶೆಟ್ಟಿ, ಶಾಲಾ ವಿಪಕ್ಷ ನಾಯಕಿ ರನ್ಯಾ, ಶಾಲಾ ಸಾಂಸ್ಕೃತಿಕ ಸಚಿವರಾದ ಕನಿಷ್ಕ, ಆರಾಧ್ಯ ಎಂ.ಪಿ. ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಸಮೀಕ್ಷ ಸುರೇಶ್ ಹಕ್ಲಾಡಿ ಅವರನ್ನು ಕೆ. ಜಯಪ್ರಕಾಶ್ ಹೆಗಡೆಯವರು ಸನ್ಮಾನಿಸಿದರು. ಕುಂದಾಪುರ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಚಂದ್ರ ನಾಯ್ಕ್ ಶುಭ ಹಾರೈಸಿದರು. ಹಾಗೆಯೇ ಸಾಧಕ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು, ಹಳೆ ವಿದ್ಯಾರ್ಥಿಗಳನ್ನು, ಪೋಷಕರ ಕ್ರೀಡಾಕೂಟದಲ್ಲಿ ವಿಜೇತರನ್ನು ಗೌರವಿಸಲಾಯಿತು.

ಅಂಗನವಾಡಿ ಹಾಗೂ ಶಾಲಾ ವಿದ್ಯಾರ್ಥಿಳಿಂದ ನೃತ್ಯ ವೈವಿಧ್ಯ, ವಿಶೇಷ ಸ್ಮರಣಶಕ್ತಿ ಪ್ರದರ್ಶನ ನಡೆಯಿತು. ನಾಟಕಗಳಾದ ಶಿವಭೂತಿ, ಹೆಡ್ಡಾಯಣ ಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಸುಧಾಕರ ಕುಲಾಲ, ಶಾಲಾ ಮುಖ್ಯ ಶಿಕ್ಷಕ ಶೇಖರ ಕುಮಾರ್, ಸಹ ಶಿಕ್ಷಕರಾದ ಸಂಜೀವ ಎಂ,  ವಿಜಯಾ ಆರ್, ಅಶೋಕ ತೆಕ್ಕಟ್ಟೆ, ವಿಜಯ ಶೆಟ್ಟಿ, ರವೀಂದ್ರ ನಾಯಕ್, ಸ್ವಾತಿ ಬಿ., ಗೌರವ ಶಿಕ್ಷಕಿ ಮಧುರ, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳು, ಊರ ಪರವೂರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಶಾಲಾ ಶಿಕ್ಷಣ ಸಚಿವರಾದ ಕೃತಿ ಸ್ವಾಗತಿಸಿ, ಶ್ರೀವತ್ಸ ಭಟ್ ವಂದಿಸಿದರು.

Exit mobile version