Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜು: ಎಂಸಿಎನ್‌ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ವಾರ್ಷಿಕೋತ್ಸವನ್ನು ಇತ್ತೀಚಿಗೆ ಆಚರಿಸಲಾಯಿತು.

ಕೋಟೇಶ್ವರ ಸರಕಾರಿ ಪಿಯು ಕಾಲೇಜಿನಪ್ರಾಂಶುಪಾಲರಾದ ಪ್ರಕಾಶ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಮಹತ್ವವನ್ನು ಒತ್ತಿ ಹೇಳಿದರು. ವಿದ್ಯಾರ್ಥಿಗಳು ಕೇವಲ ಓದಿನಲ್ಲಿ ಮಾತ್ರ ಸೀಮಿತವಾಗದೇ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡೆಗಳು ಮತ್ತು ಇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐಎಂಜೆ ವಿದ್ಯಾ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಕಾಲೇಜಿನ ಸಾಧನೆ ಮತ್ತು ಪ್ರಗತಿಯನ್ನು ಹೊಗಳಿದರಲ್ಲದೇ ಕಾರ್ಯಕ್ರಮಕ್ಕೆ, ವಿಧ್ಯಾರ್ಥಿಗಳಿಗೆ ಶುಭಹಾರೈಸಿದರು.  

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ.ಎಸ್  ಮತ್ತು. ಎಸ್ ಎನ್ ಎ ಸಂಯೋಜಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದಲ್ಲಿ ವಿಶಿಷ್ಟ ದರ್ಜೆ ಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮತ್ತು ವಿಶಿಷ್ಟ ಸಾಧಕರುಗೌರವಿಸಲ್ಪಟ್ಟರು. ಶೈಕ್ಷಣಿಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ನಡೆದ ತಂಡ ಆಧಾರಿತ ವೆರೈಟಿ ಶೋ  ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನೃತ್ಯ, ಸಂಗೀತ, ನಾಟಕ ಮತ್ತು ವಿವಿಧ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುಂದಾಪುರ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಸುಪ್ರೀತಾ ಪುರಾಣಿಕ್, ಕಾಲೇಜಿನ ಆಡಳಿತಾಧಿಕಾರಿ ಪಾರ್ಥ ಸಾರಥಿ, ಜೆನ್ನಿಫರ್ ಫ್ರೀಡಾ ಮೆನೆಜಸ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಜೇತ ತಂಡಗಳಿಗೆ ನಗದು ಬಹುಮಾನ ವಿತರಿಸಲಾಯಿತು. ರೂಪಾಶ್ರೀ ಕೆ.ಎಸ್. ಸ್ವಾಗತಿಸಿದರು. ಚಂದ್ರಶೇಖರ್ ಕೃತಜ್ಞತೆ ಸಲ್ಲಿಸಿದರು. ಕಾರ್ಯಕ್ರಮವನ್ನು ಜ್ಯೋತಿ ನಾಯಕ್ ನಿರ್ವಹಿಸಿದರು.

Exit mobile version