ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಆಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ 14ರ ಅಯೋಮಾನದ ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನಗಳಿಸಿ ಚಿಕ್ಕಮಗಳೂರಿನಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

