ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಿಗೆ ಸ್ಟ್ರೆಸ್ ಮ್ಯಾನೇಜ್ಮೆಂಟ್ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು.
ಕಾರ್ಯಗಾರದಲ್ಲಿ ಜೀವನ ಕೌಶಲ್ಯ ತರಬೇತುದಾರ ಜೈಕಿಶನ್ ಭಟ್ ಅವರು ಮಾತನಾಡಿ, “ಒತ್ತಡರಹಿತ ಮನಸ್ಥಿತಿಯಿಂದಷ್ಟೇ ಉತ್ತಮ ಗುಣಮಟ್ಟದ ಫಲಿತಾಂಶ ಸಾಧ್ಯ.” ಎಂದು ಹೇಳುವುದರೊಂದಿಗೆ ಒತ್ತಡದ ಕಾರಣಗಳು, ಸಮಯ ನಿರ್ವಹಣೆ ಮತ್ತು ಧನಾತ್ಮಕ ಚಿಂತನೆಯ ಮಹತ್ವ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದದ ಜೊತೆಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

ಅಂತಿಮ ಬಿಸಿಎ 120 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮತ್ತು ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಉಪಸ್ಥಿತರಿದ್ದರು.
ಕಾರ್ತಿಕ್ ಅತಿಥಿಗಳನ್ನು ಪರಿಚಯಿಸಿ, ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಗಳಾದ ವಿಶ್ವನಾಥ್ ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿ, ಸಿಂಚನಾ ವಂದಿಸಿದರು.