ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಯ್ಯಂಗರ್ ಎಂಬಲ್ಲಿ ನಿರ್ಮಾಣಗೊಂಡಿರುವ ಬಿಎಸ್‌ಎನ್‌ಎಲ್ ಟವರ್‌ನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಉದ್ಘಾಟಿಸಿದರು.
ಈ ಟವರ್ ಆರಂಭದಿಂದ ಹಯ್ಯಂಗರ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಮೊಬೈಲ್ ಸಂಪರ್ಕ ಹಾಗೂ ಡಿಜಿಟಲ್ ಸೇವೆಗಳ ಸುಲಭ ಲಭ್ಯತೆ ಸಿಗಲಿದೆ.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ ಗಂಟಿಹೊಳೆ, ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ., ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.