Kundapra.com ಕುಂದಾಪ್ರ ಡಾಟ್ ಕಾಂ

ಬಿ. ಬಿ. ಹೆಗ್ಡೆ ಕಾಲೇಜು: ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಬೈಂದೂರು: ವಿದ್ಯಾರ್ಥಿಗಳು ಬದುಕಿನಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಶಿಕ್ಷಣವು ಸಮಗ್ರ ವ್ಯಕ್ತಿತ್ವವನ್ನು ರೂಪಿಸುವ ಪ್ರಕ್ರೀಯೆ ಎಂಬುದನ್ನು ಸಾಧಿಸಿ ತೋರಿಸಬೇಕು. ಇಂತಹ ವಿಶೇಷ ಶಿಬಿರದಿಂದ ಪಡೆದ ಉತ್ತಮ ಅನುಭವಗಳು ಭವಿಷ್ಯದ ಬಾಳಿಗೆ ದಾರಿದೀಪವಾಗಬೇಕು ಎಂದು ಗೋಳಿಹೊಳೆ ಗ್ರಾಪಂ ಮಾಜಿ ಅಧ್ಯಕ್ಷ ಎಂ. ಆರ್. ಶೆಟ್ಟಿ ಹೇಳಿದರು.

ಗೋಳಿಹೊಳೆ ಮಹಿಷಮರ್ಧಿನಿ ಸಭಾಂಗಣದಲ್ಲಿ ನಡೆದ ಕುಂದಾಪುರ ಬಿ. ಬಿ. ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಶಿಬಿರದ ಮುಖ್ಯ ಸಂಯೋಜಕ ಹಾಗೂ ಬಿಳಿಶಿಲೆ ಶ್ರೀ ವಿನಾಯಕ ದೇವಸ್ಥಾನದ ಮೊಕ್ತೆಸರ ಶಿವರಾಜ ಪೂಜಾರಿ ಅಧ್ಯಕ್ಷತೆವಹಿಸಿದ್ದರು. ಗೋಳಿಹೊಳೆ ಗ್ರಾಪಂ ಅಧ್ಯಕ್ಷ ರಾಜು ಪೂಜಾರಿ, ಮಾಜಿ ಅಧ್ಯಕ್ಷ ಮಂಜಯ್ಯ ಪೂಜಾರಿ ಎಳಜಿತ, ಶ್ರೀಯಕ್ಷೇಶ್ವರಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ನಾಗರಾಜ ಪೂಜಾರಿ, ಸಸಿಹಿತ್ಲು ಮಂಜು ಪೂಜಾರಿ ಕಳವಾಡಿ, ದಿಲೀಪ್‌ರಾಜ್ ಬೆಂಗಳೂರು, ಶೇಷು ಮರಾಠಿ ಹಾಲಾಡಿ, ರಘುರಾಮ ಶೆಟ್ಟಿ ಮುಂಡ್ಸಾಲು, ರಾಜು ನಾಯ್ಕ್, ಗುರುಚರಣ್ ಗೋಳಿಹೊಳೆ, ಬೈಂದೂರು ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಘು ನಾಯ್ಕ್, ಎನ್‌ಎಸ್‌ಎಸ್ ಸಹಯೋಜನಾಧಿಕಾರಿ ಪ್ರೀತಿ ಹೆಗ್ಡೆ, ಸ್ವಯಂಸೇವಕ ಪ್ರತಿನಿಧಿಗಳಾದ ಸನತ್ ಅಡಿಗ, ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಶಿಬಿರಾಧಿಕಾರಿಗಳಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿದರು. ಯೋಜನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು.

Exit mobile version