Site icon Kundapra.com ಕುಂದಾಪ್ರ ಡಾಟ್ ಕಾಂ

ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಶ್ರಿಯಾ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಪ್ರತಿಷ್ಠಾನದ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಅಭಿಯಾನ ಕರ್ನಾಟಕ, ಅವರು ಆಯೋಜಿಸಿದ ಜಿಲ್ಲಾ ಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಇಲ್ಲಿನ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಸಂಸ್ಥೆಯ ವಿದ್ಯಾರ್ಥಿನಿ ಶ್ರಿಯಾ ಕೆ. (7ನೇ ತರಗತಿ) ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

ವಿದ್ಯಾರ್ಥಿನಿಗೆ ಜನತಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಗಣೇಶ ಮೊಗವೀರ, ಶಾಲೆಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಹಾಗೂ ಜನತಾ ಸಮೂಹ ಸಂಸ್ಥೆಗಳ ಶಿಕ್ಷಕ/ ಶಿಕ್ಷಕಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದರು.

Exit mobile version