Site icon Kundapra.com ಕುಂದಾಪ್ರ ಡಾಟ್ ಕಾಂ

ಭಗವದ್ಗೀತೆ ಭಾಷಣ ಸ್ಪರ್ಧೆ: ಮದರ್ ತೆರೇಸಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಶಂಕರನಾರಾಯಣ:
ಶ್ರೀ ಸೊಂದ ಸ್ವರ್ಣವಲ್ಲಿ ಮಹಾಸಂಸ್ಥಾನ ಮತ್ತು ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ  ಶಿರಸಿ ಮಠ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಭಗವದ್ಗೀತಾ ಅಭಿಯಾನ ಸ್ಪರ್ಧೆಯ ಅಂಗವಾಗಿ ನಡೆದ ‘ಭಗವದ್ಗೀತೆ ಮನ ಸ್ವಾಸ್ತ್ಯದ ಕೈಪಿಡಿ’ ಎಂಬ ವಿಷಯದ ಕುರಿತು ನಡೆದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಮದರ್ ತೆರೆಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಅವರು ಪ್ರಥಮ ಸ್ಥಾನ ಗಳಿಸಿ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಅವರ ಯಶಸ್ಸಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ತಂಡ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇನ್ನೂ ದೊಡ್ಡ ಮಟ್ಟದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

Exit mobile version