ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಹಾಗೂ ಸಂಜಯ ಗಾಂಧಿ ಶಿಕ್ಷಣ ಸಂಸ್ಥೆ ಅಂಪಾರು ಇವರ ಸಹಯೋಗದಲ್ಲಿ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ನಡೆದ 2025 – 2026ನೇ ಸಾಲಿನ ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಸಂಜಯ್ ಗಾಂಧಿ ಇಂಗ್ಲಿಷ್ ಮೀಡಿಯಂ ಸ್ಕೂಲಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಹಲವಾರು ಬಹುಮಾನಗಳನ್ನು ಪಡೆದುಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಪ್ರಥಮ ಸ್ಥಾನ ಪಡೆದ 15 ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ. 9 ದ್ವಿತೀಯ ಬಹುಮಾನ ಹಾಗೂ 10 ತೃತೀಯ ಬಹುಮಾನಗಳೊಂದಿಗೆ ಒಟ್ಟಾರೆ 34 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಅಂಪಾರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಸೂಕ್ತ ಪ್ರತಿಭೆಗಳನ್ನು ವ್ಯಕ್ತಪಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದ ವಿದ್ಯಾರ್ಥಿಗಳಿಗೆ ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ , ಶಾಲಾ ಆಡಳಿತಾಧಿಕಾರಿ, ಮುಖ್ಯೋಪಾಧ್ಯಾಯಿನಿ, ಬೋಧಕ – ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿ ಮುಂದಿನ ಹಂತಕ್ಕೆ ಶುಭ ಹಾರೈಸಿದ್ದಾರೆ.

