ಕುಂದಾಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿಗೆ ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು ಮಾರಣಕಟ್ಟೆ ಮತ್ತು ಸಹೋದರರು ಅವರ ತಂದೆ ತಾಯಿ ದಿ. ಸುಬ್ರಹ್ಮಣ್ಯ ಮಂಜರು ಮತ್ತು ವಿಶಾಲಾಕ್ಷಿ ಮಂಜರ ಹೆಸರಿನಲ್ಲಿ ಕೊಡಮಾಡುವ ಸುಸಜ್ಜಿತ ಕಂಪ್ಯೂಟರ್ ಕೊಠಡಿಯ ಶಿಲಾನ್ಯಾಸ ಕಾರ್ಯಕ್ರಮ ಡಿ.೧೩ರಂದು ಶಾಲೆಯ ವಠಾರದಲ್ಲಿ ನಡೆಯಿತು.
ಶತಮಾನೋತ್ಸವ ಕಟ್ಟಡ ದಾನಿಗಳಾದ ಹೈದರಬಾದ್ ಉದ್ಯಮಿ ಕೃಷ್ಣಮೂರ್ತಿ ಮಂಜರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಧರ್ಮದರ್ಶಿ ಸೀತಾರಾಮ ಶೆಟ್ಟಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ತಾ.ಪಂ.ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶತಮಾನೋತ್ಸವ ಸಮಿತಿ ಅಧ್ಯಕ್ಷ ಹರ್ಜಿ ಕರುಣಾಕರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರ ನಾಯ್ಕ್ ರಾಯಪ್ಪನಡಿ, ಶಾಲಾ ಮುಖ್ಯೋಪಾಧ್ಯಾಯರಾದ ಮೋಹಿನಿ ಬಾ, ನಾಗರಾಜ ಮಂಜರು ಮಾರಣಕಟ್ಟೆ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ, ಶ್ರೀನಿವಾಸ ಪೂಜಾರಿ, ಗ್ರಾ.ಪಂ.ಸದಸ್ಯರಾದ ಉದಯ ನಾಯ್ಕ್, ಸಿಂಗಾರಿ ಪೂಜಾರಿ, ಗುಂಡು ಪೂಜಾರಿ, ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ದೇವಸ್ಥಾನದ ಮೊಕ್ತೇಸರ ವಿ.ಕೆ.ಶಿವರಾಮ ಶೆಟ್ಟಿ, ವನದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಚಂದ್ರಶೇಖರ ಶೆಟ್ಟಿ, ಸಿ.ಎ ಬ್ಯಾಂಕ್ ನಿರ್ದೇಶಕ ಭಾಸ್ಕರ ಶೆಟ್ಟಿ, ಉಪ ತಹಶೀಲ್ದಾರ್ ಕೊರ್ಗು ಬಿಲ್ಲವ, ಶಿಕ್ಷಣ ಸಂಯೋಜಕ ನಿತ್ಯಾನಂದ ಶೆಟ್ಟಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ತ್ಯಾಂಪಣ್ಣ ಶೆಟ್ಟಿ, ವಿವಿಧ ಸಂಘ-ಸಂಸ್ಥೆಗಳ ಮುಖ್ಯಸ್ಥರು, ಹಳೆ ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕ ವೃಂದದವರು, ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಉಪಸ್ಥಿತರಿದ್ದರು.