ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೋಂದಾಶ್ರೀ ಸ್ವರ್ಣವಲ್ಲೀ ಮಠದವರು ನಡೆಸುವ ಶ್ರಿ ಭಗವದ್ಗೀತಾ ಅಭಿಯಾನದ ಅಂಗವಾಗಿ ಕುಂದಾಪುರದ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಭಗವದ್ಗೀತೆಯ ಶ್ಲೋಕ ಕಂಠಪಾಠ ಸ್ಪರ್ಧೆ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಿದ್ದರು.
ಈ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಿಂದ ಭಾಷಣ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದಲ್ಲಿ ಪ್ರಾಂಜಲಿ ಭಟ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶಿವಮೊಗ್ಗದಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲಾ ಪ್ರಾಂಶುಪಾಲರೂ ಆದ ಶರಣ ಕುಮಾರ, ಶಾಲಾ ಆಡಳಿತಾಧಿಕಾರಿ ವೀಣಾರಶ್ಮಿ ಎಮ್., ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಈಕೆಯ ಸಾಧನೆಗೆ ಅಭಿನಂದಿಸಿ, ಹುರಿದುಂಬಿಸಿರುತ್ತಾರೆ.

