ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ರೀಡೆಯಲ್ಲಿ ಭಾಗವಹಿಸಲು ನಿರಂತರವಾದ ಅಭ್ಯಾಸ, ತರಬೇತಿ ಅವಶಕ್ಯ. ಇತ್ತೀಚಿನ ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತಾಗಬೇಕು. ಶಿಕ್ಷಕರನ್ನು ಹಾಗೂ ಹೆತ್ತವರನ್ನು ಗೌರವಿಸಿ ಪ್ರೀತಿಸಿದರೆ ಉತ್ತಮ ವಿದ್ಯಾರ್ಥಿಗಳಾಗಿ ಬೆಳೆದು ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. ಕ್ರೀಡಾಕೂಟದಲ್ಲಿ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಉತ್ತಮ ಕ್ರೀಡಾಪಟುವಾಗಿ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕುಂದಾಪುರ ಶ್ರೀ ಸೀತಾರಾಮ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುರೇಂದ್ರ ಕೊಠಾರಿ ಹೇಳಿದರು.
ಅವರು ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ ಪ್ರವರ್ತಿತ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಗಳ ವಾರ್ಷಿಕ ಕ್ರೀಡಾಕೂಟವನ್ನು ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ವಿದ್ಯಾಸಂಸ್ಥೆಗಳ ಸಂಚಾಲಕ ಎನ್.ಸದಾಶಿವ ನಾಯಕ್ ಶುಭ ಹಾರೈಸಿದರು.
ಎಸ್.ವಿ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್.ವಿ. ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದೀಕ್ಷಿತ್ ಮೇಸ್ತ, ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ನಿರಂಜನ್ ಖಾರ್ವಿ, ಸರಸ್ವತಿ ವಿದ್ಯಾಸಂಸ್ಥೆಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಉಪನ್ಯಾಸಕಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ವಂದಿಸಿದರು.

