Site icon Kundapra.com ಕುಂದಾಪ್ರ ಡಾಟ್ ಕಾಂ

ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ರಿ. ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ನಡೆಸಲಾದ ಜ್ಞಾನ ರಥ ಎನ್ನುವ ನೈತಿಕ ಮೌಲ್ಯಾಧಾರಿತ ಪುಸ್ತಕದ ಚಿತ್ರಕಲಾ ಸ್ಪರ್ಧೆಯಲ್ಲಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಖಾರ್ವಿಕೇರಿ ಗಂಗೊಳ್ಳಿಯ 7ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.

ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿಯ ಪುತ್ರ.

Exit mobile version