ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಬಸ್ರೂರು ಇವರ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಇತ್ತೀಚಿಗೆ ಜರುಗಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ಸರ್ಕಾರಿ ವಿಭಾಗೀಯ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ನಳಿನಾಕ್ಷೀ ಎಂ. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಎಚ್.ಐ.ವಿ ಸೋಂಕು ಪ್ರಸ್ತುತ ಗುಣಪಡಿಸಲಾಗದ ಕಾರಣ ಏಡ್ಸ್ ಜಾಗೃತಿ ದಿನದ ಅವಶ್ಯಕತೆ ಇದ್ದು ಎಚ್.ಐ.ವಿ ಸೋಂಕಿತರನ್ನು ಸಮಾನವಾಗಿ ಕಾಣುವ ಮೂಲಕ ಸ್ವಾಸ್ತ್ಯ ಆರೋಗ್ಯಯುತ ಸಮಾಜನ್ನು ನಿರ್ಮಾಣ ಮಾಡುವುದರಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ವಿದ್ಯಾರ್ಥಿಗಳಿಗೆ ಎಚ್.ಐ.ವಿ ಏಡ್ಸ್ ಹರಡುವಿಕೆ, ತಡೆಗಟ್ಟುವಿಕೆ ಮತ್ತು ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕರಾದ ಡಾ. ರವಿಚಂದ್ರ ಸ್ವಾಗತಿಸಿ, ವಿದ್ಯಾರ್ಥಿನಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಮನವಿ ಕೆ. ವಂದಿಸಿದರು.