ಕುಂದಾಪ್ರ ಡಾಟ್ ಕಾಂಸುದ್ದಿ.
ಕೋಟ: ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಬುಧವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ವಿಕ್ಷೀಸಿ, ಮಾತನಾಡಿ ಇಡೀ ದೇಶವೇ ಹೆಮ್ಮೆ ಪಡುವ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಇವರ ಕಾರ್ಯವೈಕರಿಯ ಬಗ್ಗೆ ಪ್ರಶಂಸಿದರು.
ಈ ವೇಳೆ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಗೌರವಿಸಿದರು.

