Kundapra.com ಕುಂದಾಪ್ರ ಡಾಟ್ ಕಾಂ

ಜಯಪ್ರಕಾಶ್ ಹೆಗ್ಡೆಯವರಿಗೆ ಅಧಿಕಾರದ ದಾಹ: ವಿಕಾಸ್ ಹೆಗ್ಡೆ

ಕುಂದಾಪುರ: ಜಯಪ್ರಕಾಶ್ ಹೆಗ್ಡೆಯವರಿಗೆ ನಾಲ್ಕು ಭಾರಿ ಪಕ್ಷದಿಂದ ಸ್ವರ್ಧಿಸಲು ಅವಕಾಶ ನೀಡಲಾಗಿತ್ತು. ಆದರೆ ಈ ಭಾರಿ ಕಾಂಗ್ರೆಸ್ ಕಾರ್ಯಕರ್ತರ ಒಲವು ಪ್ರತಾಪಚಂದ್ರ ಶೆಟ್ಟಿಯವರ ಪರವಾಗಿತ್ತು. ಹಾಗಾಗಿ ಮತ್ತೆ ಚುನಾವಣೆಗೆ ಸ್ವರ್ಧಿಸಲು ಹೆಗ್ಡೆಯವರಿಗೆ ಟಿಕೆಟ್ ನೀಡಿರಲಿಲ್ಲ. ಇದು ಅವರಲ್ಲಿನ ಅಧಿಕಾರ ದಾಹವನ್ನು ಸೂಚಿಸುತ್ತದೆ. ಆದರೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬರ ಒಲವು ಪ್ರತಾಪಚಂದ್ರ ಶೆಟ್ಟಿ ಅವರ ಕಡೆಗೆ ಇರುವುದರಿಂದ ಅವರು ಗೆದ್ದೇ ಗೆಲ್ಲುತ್ತಾರಂಬ ವಿಶ್ವಾಸ ನಮಗಿದೆ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ ಹೇಳಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

ಅವರು ಕುಂದಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಕಳೆದ ಎರಡು ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯನಾಗಿ ಸದನದ ಒಳಗೆ ಅತಿ ಹೆಚ್ಚು ಪ್ರಶ್ನೆಗಳನ್ನು ಕೇಳಿದ್ದ ಹೆಗ್ಗಳಿಕೆ, ಪ್ರತಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಆ ಭಾಗದ ಸಮಸ್ಯೆಯನ್ನು ಆಲಿಸಿ ನೇರವಾಗಿ ಅನುದಾನ ನೀಡುವ ಕೆಲಸ ಮಾಡಿದ್ದಾರೆ. ಸಿಆರ್‌ಝಡ್, ಕಸ್ತೂರಿ ರಂಗನ್, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಘನತ್ಯಾಜ್ಯ ವಿಲೇವಾರಿ, ವಾರಾಹಿ ನೀರಾವರಿ ವಿಚಾರದಲ್ಲಿ ವಿಧಾನಸೌಧ ಹೊರಗೆ ಮತ್ತು ಒಳಗೆ ತನ್ನಿಂದ ಆಗಬಹುದಾದ ಎಲ್ಲಾ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದಾರೆ ಹೇಳಿದರು.
ಕಾಂಗ್ರೆಸ್‌ನ ಕಾರ್ಯಕರ್ತರ ಒತ್ತಾಯ ಹಾಗೂ ವರಿಷ್ಠರ ನಿರ್ಧಾರದಿಂದಾಗಿ ಪ್ರತಾಪಚಂದ್ರ ಶೆಟ್ಟಿ ಅವರನ್ನೇ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ. ಪ್ರತಾಪಚಂದ್ರ ಶೆಟ್ಟಿ ಅವರನ್ನು ಗೆಲ್ಲಿಸಲು ಕಾಂಗ್ರೆಸ್‌ನ ಸಚಿವರು, ಶಾಸಕರು ಸೇರಿದಂತೆ ಎಲ್ಲಾ ಹಂತದ ಜನಪ್ರತಿನಿಧಿಗಳ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮತಗಳು ಕಾಂಗ್ರೆಸ್ ಸಿಕ್ಕರೆ ನಮ್ಮ ಅಭ್ಯರ್ಥಿ ಗೆಲ್ಲತ್ತಾರೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಹೇಳಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ನಾರಾಯಣ ಆಚಾರಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶೋಕ್ ಪೂಜಾರಿ ಉಪಸ್ಥಿತಿರಿದ್ದರು.

Exit mobile version