ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಾರ್ಕಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ ಯೋಜನೆಯಡಿ ಖಾಲಿಯಿರುವ ವಲಯ ಸಂಯೋಜಕರ ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಯಾವುದೇ ಪದವೀಧರರಾಗಿದ್ದು, ಸ್ಥಳೀಯ ಭಾಷೆಯಲ್ಲಿ (ಸಂವಹನ ಹಾಗೂ ಬರವಣಿಗೆ) ಯಲ್ಲಿ ಪ್ರಾವಿಣ್ಯತೆ ಹೊಂದಿರುವ, ಟೆಕ್ನಾಲಜಿ ಹಾಗೂ ಸಾಫ್ಟ್ವೇರ್ ಅಪ್ಲಿಕೇಷನ್‌ನಲ್ಲಿ ಕನಿಷ್ಠ 2 ವರ್ಷಗಳ ಸೇವಾ ಅನುಭವವನ್ನು ಹೊಂದಿರುವ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಒಂದನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

