ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಂದ, ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ: 204, ಒಂದನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

