Site icon Kundapra.com ಕುಂದಾಪ್ರ ಡಾಟ್ ಕಾಂ

ಇಎಸ್ಐ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ಸರಕಾರದ ಗಮನ ಸೆಳೆದ ಶಾಸಕ ಕಿರಣ್ ಕುಮಾರ್ ಕೊಡ್ಗಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೆಳಗಾವಿ:
ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸೆ ಒದಗಿಸುವ (ಕಾರ್ಮಿಕ ರಾಜ್ಯ ವಿಮಾ ಯೋಜನೆ) ಸೇವೆಗಳ ಇಲಾಖೆ ಹಾಗೂ ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಮಾಡಿಕೊಂಡ ಒಡಂಬಡಿಕೆಯ ಅವಧಿಯು ಈಗಾಗಲೇ ಡಿ.7ರಂದು ಮುಕ್ತಾಯಗೊಂಡಿದ್ದು ರೋಗಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು ಖಾಸಗಿ ಆಸ್ಪತ್ರೆಯ ಒಡಂಬಡಿಕೆ ನವೀಕರಣ ಆಗದ ಕಾರಣ ಚಿಕಿತ್ಸೆಯನ್ನು ನೀಡಲು ನಿರಾಕರಿಸುತ್ತಿದ್ದು ವಿಮಾ ಅರ್ಹ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರನ್ನು ಭೇಟಿ ಮಾಡಿ ಮಾತನಾಡಿದರು. ಅತಿ ಜರೂರುರಾಗಿ ಕಾರ್ಮಿಕ ರಾಜ್ಯ ವಿಮಾ ಯೋಜನೆ ಸೇವೆಗಳ ಇಲಾಖೆ ಮತ್ತು ಆಯ್ದ ಖಾಸಗಿ ಆಸ್ಪತ್ರೆಗಳ ಹೊಂದಾಣಿಕೆ (ಟೈ ಅಪ್) ಒಡಂಬಡಿಕೆಯನ್ನು ನವೀಕರಿಸಿ ವಿಮಾ ರೋಗಿಗಳಿಗೆ ಅಗತ್ಯ ಚಿಕಿತ್ಸೆಯನ್ನು ಕ್ಲಪ್ತ ಸಮಯದಲ್ಲಿ ನೀಡುವ ಬಗ್ಗೆ ಶಾಸಕರು ಸಚಿವರೊಂದಿಗೆ ಚರ್ಚೆ ನಡೆಸಿ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದರು. ಸಚಿವರು ಮಾತನಾಡಿ ಸೂಕ್ತ ಕ್ರಮದ ಬಗ್ಗೆ ಭರವಸೆ ನೀಡಿದರು.

Exit mobile version