Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ವಾರ್ಷಿಕೋತ್ಸವ – ಧ್ವಜಾರೋಹಣ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರು ಧ್ವಜಾರೋಹಣ ಗೈದು ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನು ತಿಳಿಸಿದರು.

ಈ ಸಭಾ ಕಾರ್ಯಕ್ರಮದಲ್ಲಿ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಬೋಧಕ  ಬೋಧಕೇತರ ವರ್ಗದವರು  ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅವನಿಕಾ ಜಿ. ನಿರೂಪಿಸಿ, ಅಮೋಘ ಪೈ ಸ್ವಾಗತಿಸಿ, ಹರಿದಾಸ್ ಆರ್. ಮಲ್ಯ  ವಂದನಾರ್ಪಣೆ ಗೈದರು. 

ಈ ಕಾರ್ಯಕ್ರಮದ ನಂತರ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ  ಐಸ್ ಕ್ರಿಂ ವಿತರಿಸಲಾಯಿತು.

Exit mobile version