Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಮಾನವ ಹಕ್ಕುಗಳ ದಿನಾಚರಣೆ 

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಮಾನವನು ಮಾನವನನ್ನು ಅರಿತು ಗೌರವಿಸಿ ಸಹಕಾರ ಸೌಹಾರ್ದತೆಯಿಂದ ಇರಲು ಮಾನವ ಹಕ್ಕು ಅತಿ ಅವಶ್ಯಕ. ಮಾನವ ಹಕ್ಕು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳು. ಈ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ ಎಂದು ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ರೋಹಿಣಿ ಹೇಳಿದರು.

ಅವರು ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟೇಶ್ವರದ ಐಕ್ಯೂಎಸಿ ಮಾನವಿಕ ಸಂಘ ಇತಿಹಾಸ ಮತ್ತು ರಾಜ್ಯಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಾನವ ಹಕ್ಕುಗಳ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಾಂಶುಪಾಲರಾದ ರಾಮರಾಯ ಆಚಾರ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಐ.ಕ್ಯೂ.ಎ.ಸಿ ಸಂಚಾಲಕ ನಾಗರಾಜ ಯು. ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ ಎಂ., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ ಶೇಖರ್ ಬಿ., ಮಾನವ ಹಕ್ಕುಗಳ ಸಂಘದ ರಕ್ಷಿತಾ ಮತ್ತು ಗಣೇಶ ಉಪಸ್ಥಿತರಿದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥರಾದ  ಗಣೇಶ್ ಪೈ. ಎಂ. ಪ್ರಸ್ತಾವಿಸಿ ಸ್ವಾಗತಿಸಿದರು. ನಾಗಮ್ಮ ಅಂತಿಮ ಬಿ ಎ ಪ್ರಾರ್ಥಿಸಿ, ಕೃತಿಕಾ ಕಾರ್ಯಕ್ರಮ ನಿರೂಪಿಸಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಭಾಗೀರಥಿ ನಾಯ್ಕ ವಂದಿಸಿದರು.

Exit mobile version