Site icon Kundapra.com ಕುಂದಾಪ್ರ ಡಾಟ್ ಕಾಂ

ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದ.
ಕುಂದಾಪುರ:
ಉಡುಪಿ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು 2025-26ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಹಂತದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಾದ ಜಾನಪದ ಗೀತೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಯುಕ್ತಾ ಹೊಳ್ಳ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  

ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version