Site icon Kundapra.com ಕುಂದಾಪ್ರ ಡಾಟ್ ಕಾಂ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು 2026 ರ ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ಅಥವಾ ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Exit mobile version