ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಕ್ರೀಡಾ ಕ್ಷೇತ್ರ ವಿಫುಲ ಅವಕಾಶಗಳಿವೆ. ಪಾಠದ ಜೊತೆಗೆ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಬೆಳವಣಿಗೆಯಾಗಲು ಸಾಧ್ಯವಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹೆಚ್ಚು ಸಹಾಯಕವಾಗುತ್ತದೆ ಎಂದು ಪತ್ರಕರ್ತ ಬಿ. ರಾಘವೇಂದ್ರ ಪೈ ಹೇಳಿದರು.
ಅರು ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿ ಮಾತನಾಡಿದರು.

ಉದ್ಯಮಿ ಸುರೇಶ ಪೂಜಾರಿ ಧ್ವಜಾರೋಹಣಗೈದು ಶುಭ ಹಾರೈಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಎಸ್‌ಡಿಎಂಸಿ ಸದಸ್ಯ ಅಶೋಕ ಪೂಜಾರಿ, ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ ದೈ.ಶಿ.ಶಿಕ್ಷಕಿ ಪವಿತ್ರ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಶಾಲೆಯ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಉಷಾ ಕುಮಾರಿ ಸ್ವಾಗತಿಸಿ, ಸಹಶಿಕ್ಷಕಿ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.