Site icon Kundapra.com ಕುಂದಾಪ್ರ ಡಾಟ್ ಕಾಂ

ಡಿ.23ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಿಂದ ರಾಷ್ಟ್ರೀಯ ರೈತರ ದಿನಾಚರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು
: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ, ಹಿರಿಯ ರೈತರ ಸನ್ಮಾನ, ಸಾಧಕರಿಗೆ ರೈತಸಿರಿ ಗೌರವಾರ್ಪಣೆ ಹಾಗೂ ಹಾಲು ಉತ್ಪಾದಕರಿಗೆ ಪುರಸ್ಕಾರವು ಡಿ.23ರ ಮಂಗಳವಾರ ಅಪರಾಹ್ನ 3.00ಕ್ಕೆ ಉಪ್ಪುಂದದ ಸಂಘದ ರೈತಸಿರಿ ಸಭಾಭವನದಲ್ಲಿ ನಡೆಯಲಿದೆ.  

ರೈತರ ದಿನಾಚರಣೆಯ ಉದ್ಘಾಟನೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಅವರು ನೆರವೇರಿಸಲಿದ್ದಾರೆ.  ಖಂಬದಕೋಣೆ ರೈ.ಸೇ.ಸ.ಸಂಘದ ಅಧ್ಯಕ್ಷರಾದ ಎಸ್‌. ಪ್ರಕಾಶ್ವಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಮಾಜಿ ನಿರ್ದೇಶಕ ಹಾಗೂ ಪ್ರಗತಿಪರ ಕೃಷಿಕರು ಮತ್ತು ಹಿರಿಯ ಸದಸ್ಯರಾದ ದೀಟಿ ಸೀತಾರಾಮ ಮಯ್ಯ ಅವರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ. ಈ ವೇಳೆ ವಿವಿಧ ಅತಿಥಿ ಗಣ್ಯರು, ಸಂಘದ ನಿರ್ದೇಶಕರುಗಳು ಉಪಸ್ಥಿತರಿರಲಿದ್ದಾರೆ.

ಅಂದು ಮಧ್ಯಾಹ್ನ ಗಂಟೆ 2.00ರಿಂದ ಪ್ರಸಿದ್ದ ಕಲಾವಿದರ ಕೊಡುವಿಕೆಯಿಂದ ಜಾನಪದ ಸಂಗೀತ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧ್ಯಕ್ಷರಾದ ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ಸಿಇಓ ವಿಷ್ಣು ಪೈ ಎನ್‌. ಮತ್ತು ಉಪಾಧ್ಯಕ್ಷರಾದ ಮಂಜು ದೇವಾಡಿಗ ಕೋರಿದ್ದಾರೆ.

Exit mobile version