ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಪ್ರಸಿದ್ಧ ದೇಗುಲ ಕೋಟದ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನ ಇದರ ವಾರ್ಷಿಕ ಜಾತ್ರೆ ಬರುವ ಜನವರಿ 10 ಮತ್ತು 11ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ. ಕುಂದರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿ ವರ್ಷ ಸಾವಿರಾರು ಮಂದಿ ಶ್ರೀ ಕ್ಷೇತ್ರದ ಗೆಂಡೋತ್ಸವ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳುತ್ತಿದ್ದು ಜಾತ್ರೆಯನ್ನುಶ್ರದ್ಧಾ ಭಕ್ತಿಯಿಂದ ಯಶಸ್ವಿಗೊಳಿಸುತ್ತಿದ್ದಾರೆ ಅದೇ ರೀತಿಯಲ್ಲಿ ಈ ಬಾರಿ ಜಾತ್ರೆಯನ್ನು ಯಶಸ್ವಿಗೊಳಿಸಲು ಭಕ್ತಾಧಿಗಳಲ್ಲಿ ಮನವಿ ಮಾಡಿದರು.

ದೇಗುಲದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಸುಭಾಷ್ ಶೆಟ್ಟಿ, ಗಣೇಶ್ ನೆಲ್ಲಿಬೆಟ್ಟು, ಜ್ಯೋತಿ ಡಿ. ಕಾಂಚನ್, ಸುಬ್ರಾಯ ಜೋಗಿ, ಅರ್ಚಕ ಪ್ರತಿನಿಧಿ ಕೃಷ್ಣ ಜೋಗಿ, ಉದಯ್ ಜೋಗಿ, ಕೋಟ ಪಂಚಾಯತ್ ಸದಸ್ಯ ಭುಜಂಗ ಗುರಿಕಾರ, ಸ್ಥಳೀಯರಾದ ದೇವದಾಸ್ ಕಾಂಚನ್, ಜೀವನ್ ಕದ್ರಿಕಟ್ಟು, ಶೇವಧಿ ಸುರೇಶ್ ಗಾಣಿಗ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ ಇದ್ದರು.
ಕಾರ್ಯಕ್ರಮವನ್ನು ವ್ಯವಸ್ಥಾಪನಾ ಸಮಿತಿಯ ಸದಸ್ಯ ಚಂದ್ರ ಆಚಾರ್ ನಿರೂಪಿಸಿ, ವಂದಿಸಿದರು.