Kundapra.com ಕುಂದಾಪ್ರ ಡಾಟ್ ಕಾಂ

ವಂಡ್ಸೆ ಶಾಲೆಯಲ್ಲಿ ಪೋಷಕರ ಕ್ರೀಡಾಕೂಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿ ಪೋಷಕರ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.

ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟದ ಜೊತೆಯಲ್ಲಿ 2023ರಲ್ಲಿ ಶಾಲೆಯ ವಿದ್ಯಾರ್ಥಿ ಪೋಷಕರಿಗೂ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡು ಬಂತು. ಹೊಸ ಬದಲಾವಣೆಗೂ ಕಾರಣವಾಯಿತು. ತಮ್ಮ ಮಕ್ಕಳ ಎದುರು ಪೋಷಕರು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಮಕ್ಕಳಿಗೆ ಖುಷಿ ಪಡಿಸುವ ಅಪರೂಪದ ಸನ್ನಿವೇಶ ಸೃಷ್ಟಿಯಾಯಿತು.

ಸೋಮವಾರ ನಡೆದ ಪೋಷಕರ ಕ್ರೀಡಾಕೂಟಕ್ಕೆ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಡಾ. ಪೂರ್ಣಿಮಾ ಅವರು ಚಾಲನೆ ನೀಡಿದರು. ಶಾಲಾ ಹಿರಿಯ ಮುಖ್ಯೋಪಾಧ್ಯಾಯರಾದ ಶಂಕರ ಅವರು ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಾಗೇಂದ್ರ ಉಡುಪ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂಜೀವ ಪೂಜಾರಿ, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ರಾಜು ಎನ್. ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Exit mobile version