ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆಯು ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾದ ಕುಂದಾಪುರ ಪೋಲಿಸ್ ಸಬ್ ಇನ್ಸಪೆಕ್ಟರ್ ನಂಜಾ ನಾಯ್ಕ್ ಎನ್. ಅವರು ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷಾ ತಯಾರಿಯಲ್ಲಿ ಪೋಷಕರ ಪಾತ್ರ ಹಾಗೂ ಫೋನಿನಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪೋಷಕರು ತಮ್ಮ ಮಕ್ಕಳ ಎಲ್ಲಾ ಚಲನವಲನಗಳನ್ನು ನಿಗಾವಹಿಸಿ, ಅವರನ್ನು ಸಮಾಜದ ಹಾಗೂ ದೇಶದ ಉತ್ತಮ ಪ್ರಜೆಗಳನ್ನಗಿ ರೂಪಿಸಬೇಕೆಂದು ತಿಳಿಸಿದರು.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದಾ ಸಂದೀಪ್ ಗಾಣಿಗ ಹಾಗೂ ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ಅವರು ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ ಅವರು ಸ್ವಾಗತಿಸಿ, ಸಹ ಶಿಕ್ಷಕಿ ಆಶಾಬಾಯಿ ಕಾರ್ಯಕ್ರಮ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಸಂಯೋಜಕ ಶಿಕ್ಷಕರಾದ ಮಾಧವ ವಂದಿಸಿದರು.