Kundapra.com ಕುಂದಾಪ್ರ ಡಾಟ್ ಕಾಂ

ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬ್ರಹ್ಮಾವರ:
ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ ಬ್ರಹ್ಮಾವರ ಇವರ ಆಶ್ರಯದಲ್ಲಿ ಬ್ಯಾಂಕ್ ಮಿತ್ರ ಹಾಗೂ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಣಿಪಾಲ ಕೆನರಾ ಬ್ಯಾಂಕ್ ಉಪ ಮಹಾಪ್ರಬಂಧಕರಾದ ಪಭಿತ್ರ ಕುಮಾರ್ ದಾಸ್ ಅವರು ಮಾತನಾಡಿ, ಕೆನರಾ ಬ್ಯಾಂಕ್ ದೇಶದ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನಾಲ್ಕನೇ ಅತಿ ದೊಡ್ಡ ಬ್ಯಾಂಕ್, ಸುಮಾರು 20ಲಕ್ಷ ಕೋಟಿ ವ್ಯವಹಾರವನ್ನು ನಡೆಸುತ್ತಿದೆ, ಜೊತೆಗೆ ಲಕ್ಷಾಂತರ ಜನರಿಗೆ ಸ್ವ ಉದ್ಯೋಗಿಗಳಿಗೆ, ಹಣಕಾಸಿನ ನೆರವನ್ನು ನೀಡಿ, ಅವರ ಆರ್ಥಿಕತೆಗೆ ಹಾಗೂ ದೇಶದ ಆರ್ಥಿಕತೆಗೆ ಸುಧಾರಣೆಗೆ ಹೆಚ್ಚು ಒಲವು ನೀಡಿದೆ ಎಂದರು.

ಅದೇ ರೀತಿ ಸಾಮಾಜಿಕ ಭದ್ರತಾ ಯೋಜನೆಗಳಾದ PMJJY, PMSBY, APY, PMJDY ಕುರಿತಾಗಿ ಹಾಗೂ ಬ್ಯಾಂಕ್ ಮಿತ್ರ  ಬಗ್ಗೆ ಸವಿಸ್ಥಿರವಾಗಿ, ಮಾಹಿತಿ ನೀಡಿದರು. ಹಾಗೆಯೇ ,  ರುಡ್ ಸೆಟ್, RSETI ಸಂಸ್ಥೆಗಳಲ್ಲಿ ತರಬೇತಿಯನ್ನು ಕೊಡುವುದರ ಜೊತೆಗೆ ವಿವಿಧ ರೀತಿಯ ಸಬ್ಸಿಡಿ ಲೋನ್ ಗಳ ಬಗೆಗೂ ವಿವರಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಶುಭ ಹಾರೈಸಿದರು.

ಅದೇ ರೀತಿ ಇನ್ನೋರ್ವ ಮುಖ್ಯ ಅತಿಥಿಯಾಗಿ  ಆಗಮಿಸಿದ್ದ ಬ್ರಹ್ಮಾವರ ದೇವಕಿ ಕನ್ವೆನ್ಷನ್ ಹಾಲ್ ಮಾಲಕರಾದ ಭರತ್ ಶೆಟ್ಟಿ ಅವರು ಮಾತನಾಡಿ, ವೃತ್ತಿ ಹಾಗೂ ಪ್ರವೃತ್ತಿಯ ಬಗೆಗಿನ ವ್ಯತ್ಯಾಸವನ್ನು ಬಹಳ ಸೊಗಸಾಗಿ ಬಣ್ಣಿಸಿದರು. ಸೋಲು ಗೆಲುವುಗಳು ಕೆಲಸದಲ್ಲಿ  ಸಾಮಾನ್ಯ , ಹಾಗಾಗಿ  ದಿಟ್ಟತನದಿಂದ  ಹಾಗೂ ಶ್ರದ್ಧೆಯಿಂದ ಕೆಲಸ ಮುಂದುವರಿಸಿ ಯಶಸ್ಸು ನಿಮ್ಮದಾಗುತ್ತದೆ ಎಂದು ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕೆನರಾ ಬ್ಯಾಂಕ್ ನ ಲೀಡ್ ಬ್ಯಾಂಕ್ ನ ಮ್ಯಾನೇಜರ್ ಹರೀಶ್ ಸರ್  ಮಾತನಾಡಿ,  ಬ್ಯಾಂಕ್ ಮಿತ್ರ ಯೋಜನೆಯ ಮುಖ್ಯ ಉದ್ದೇಶ ಬ್ಯಾಂಕ್ ಶಾಲೆಗಳಿಲ್ಲದಲ್ಲಿಗೆ ಮತ್ತು ಇಲ್ಲಿಯ ತನಕ ಬ್ಯಾಂಕಿಂಗ್ ಸೌಲಭ್ಯಗಳಿಂದ ಹೊರಗುಳಿದವರಿಗೆ, ಬ್ಯಾಂಕಿಂಗ್ ಸೇವೆಯನ್ನು ಒದಗಿಸುವುದು. ಹಾಗಾಗಿ ಬ್ಯಾಂಕ್ ಮಿತ್ರ ಅಭ್ಯರ್ಥಿಗಳು ಬ್ಯಾಂಕ್ ನ ಪ್ರತಿನಿಧಿಗಳು. ನಿಮ್ಮಲ್ಲಿ ಯಾವುದೇ ರೀತಿಯ ತೊಂದರೆಗಳು ಬಂದರೂ ಕೂಡ ಕೊಡಲೇ ಸಂಭಂದಪಟ್ಟ ಅಧಿಕಾರಿಗಳ ಮುಖಾಂತರ ಪರಿಹರಿಸಿಕೊಳ್ಳಲು ಅವಕಾಶವಿದೆ ಎಂದರು ಹಾಗೂ ಸಮಾಜದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಎಂದು ಹೇಳಿ ಶುಭ ಹಾರೈಸಿದರು.

ಅದೇ ರೀತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಬೊಮ್ಮಯ್ಯ ಎಂ. ಮಾತನಾಡಿ, ಸಂಸ್ಥೆಯು ನೀಡಿದ ತರಬೇತಿಯನ್ನು ಉತ್ತಮವಾಗಿ ನಿಮ್ಮ ಮುಂದಿನ ಜೀವನದಲ್ಲಿ ಅಳವಡಿಸಿಕೊಳ್ಳಿ,  ಶ್ರದ್ಧೆಯಿಂದ ಪಡೆದ ತರಬೇತಿಯನ್ನು  ನಿಮ್ಮ ಮುಂದಿನ ಕೆಲಸಗಳಲ್ಲಿ ಅಳವಡಿಸಿಕೊಂಡು ಯಶಸ್ವಿಯಾಗಿ. ಸಾಮಾನ್ಯ ಜನರಿಗೆ ನಿಮ್ಮಿಂದ ಬ್ಯಾಂಕಿಂಗ್ ಕ್ಷೇತ್ರದ ಕುರಿತಾಗಿ ಉತ್ತಮ ಮಾಹಿತಿಗಳು ಲಭಿಸಲಿ ಎಂದು ಹೇಳಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ  ಕೆನರಾ ಬ್ಯಾಂಕ್ ಮಿತ್ರ ತರಬೇತುದಾರರಾದ ಸುಂದರೇಶ, ಮಣಿಪಾಲ ವೃತ್ತ ಕಚೇರಿ, ಸೆಕ್ಷನ್ ಇನ್ಚಾರ್ಜರ್ ಅನಿತಾ ಶೆಟ್ಟಿ, ಬಿಸಿ ಮೇಲ್ವಿಚಾರಕರಾದ ಧನರಾಜ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಚೈತ್ರ  ಕೆ. ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಸಂತೋಷ್ ಸ್ವಾಗತಿಸಿ, ಕಚೇರಿ ಸಹಾಯಕ ಶಾಂತಪ್ಪ ವಂದಿಸಿದರು.

Exit mobile version