ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 114ನೇ ತಿಂಗಳ ಕಾರ್ಯಕ್ರಮ ಶ್ರೀ ಕಾಶೀ ಮಠ ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಘರ್ ಘರ್ ಭಜನ್ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಜರುಗಿತು.

ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ರಾಧಾಕೃಷ್ಣ ಶೆಣೈ, ತ್ರಿವಿಕ್ರಮ ಪೈ ಹಾಗೂ ಅನಂತ ಕಾಮತ್ ಅವರನ್ನು ಅಕಾಡೆಮಿ ವತಿಯಿಂದ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಎಮ್. ರತ್ನಾಕರ್ ಪೈ ಅವರು ಸಮ್ಮಾನಿಸಿದರು. ಉದಯ ಭಂಡಾರ್‌ಕಾರ್ ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.