Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಲಿಗ್ರಾಮ: ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಮೃತ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ಸಾಲಿಗ್ರಾಮದ ಹಾಡಿಮನೆ ಹೋಟೆಲ್ ಮುಂಬಾಗ ನಡೆದಿದೆ.

ಮೃತರನ್ನು ರಿಕ್ಷಾ ಚಾಲಕ ಭೋಜ ಪೂಜಾರಿ(52) ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಸಾಲಿಗ್ರಾಮದ ಹಾಡಿಮನೆ ಹೋಟೆಲ್ ಮುಂಬಾಗ ಬರುತ್ತಿದ್ದ ವೇಳೆ ರಸ್ತೆಯ ಹಂಪ್ಸ್‌ ಮೇಲೇರಿ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

ಮೃತರು ಕಾರ್ಕಡದ ನಿವಾಸಿಯಾಗಿದ್ದು ಸಾಲಿಗ್ರಾಮ ರಿಕ್ಷಾ ಚಾಲಕ, ಮಾಲಕರ ಸಂಘದ ಸದಸ್ಯರಾಗಿದ್ದಾರೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಇಬ್ಬರು ಸಹೋದರರು, ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ.

Exit mobile version