ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಸರಕಾರಿ ಶಾಲೆಗಳಲ್ಲಿ ಪ್ರತಿವರ್ಷ ಮಕ್ಕಳ ದಾಖಲಾತಿ ಕೂಡ ಹೆಚ್ಚುತ್ತಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿಯಿಂದ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸಹಾಯಕವಾಗುತ್ತಿದ್ದು, ಶಾಲೆಯಿಂದ ಹೊರಗುಳಿಯುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಉದ್ಯಮಿ ಉಮೇಶ್ ಎಲ್. ಮೇಸ್ತ ಹೇಳಿದರು.
ಅವರು ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ದೊಡ್ಮನೆ ನಂದ ಪೂಜಾರಿ ರಂಗ ಮಂಟಪದಲ್ಲಿ ನಡೆದ ಶಾಲೆಯ 106ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ ಧ್ವಜಾರೋಹಣಗೈದರು.
ಕುಂದಾಪುರದ ವಕೀಲ ಚಂದ್ರಕಾಂತ ಎಸ್. ಹುಂಡೇಕರ್ ಸ್ವಸ್ತಿ ವಾಚನ ಮಾಡಿದರು. ಗುಜ್ಜಾಡಿ ಗ್ರಾಪಂ. ಸದಸ್ಯೆ ತುಂಗಾ ಪೂಜಾರಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಎಸ್‌ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಎಸ್‌ಡಿಎಂಸಿ ಉಪಾಧ್ಯಕ್ಷೆ ಅನಿತಾ, ಹೆಮ್ಮಾಡಿ ಕ್ಲಸ್ಟರ್ ಸಿಆರ್‌ಪಿ ಯಶೋಧಾ, ಶಾಲಾ ವಿದ್ಯಾರ್ಥಿ ನಾಯಕಿ ತನ್ವಿಕಾ ಖಾರ್ವಿ, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ಸಾಧಕ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮುಖ್ಯೋಪಾಧ್ಯಾಯ ಗಂಗಾಧರ ಆರ್. ಬಂಟ್ ವರದಿ ವಾಚಿಸಿದರು. ಸಹ ಶಿಕ್ಷಕಿ ಆಶಾ ಸ್ವಾಗತಿಸಿದರು. ಸಹ ಶಿಕ್ಷಕ ಶ್ರೀಧರ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಭಾರತಿ ಡಿ. ಎನ್. ವಂದಿಸಿದರು.