ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಮಾಚಿ ಮನೆಯ ನಿವಾಸಿ ಮಂಜುನಾಥ ಪೂಜಾರಿ (57) ಅವರು ಶನಿವಾರದಂದು ರಾತ್ರಿ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ.
ಅವರನ್ನು ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂಳಗೆ ಸಾವನ್ನಪ್ಪಿದ್ದರು.
ಅವರು ಮೆಸ್ಕಾಂ ಲೈನ್‌ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಲ್ಲೂರು – ಉಪ್ಪಿನಕುದ್ರು ಗಣೇಶೋತ್ಸವ ಸಮಿತಿ ಸದಸ್ಯರಾಗಿದ್ದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

