Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಉದ್ಘಾಟನೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ಬೈಂದೂರು ತಾಲೂಕು ಕೇಂದ್ರದ ಅಭಿವೃದ್ಧಿಯ ದೂರದೃಷ್ಟಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಯಾಗಿದ್ದು ಜನರ ಬೇಡಿಕೆಯಂತೆ ಶೀಘ್ರ ಸುಸಜ್ಜಿತ ಬಸ್ ಡಿಪೋ ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಅವರು ಬೈಂದೂರು ಕೆ.ಎಸ್.ಆರ್.ಟಿ.ಸಿ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು. ನೂತನ ಬಸ್ ನಿಲ್ದಾಣಕ್ಕೆ ಕೊಲ್ಲೂರು ಮೂಕಾಂಬಿಕಾ ಎಂದು ನಾಮಕರಣ ಮಾಡಲು ಪ್ರಯತ್ನಿಸಲಾಗುವುದು ಎಂದರು.

ಶಾಸಕ ಗುರುರಾಜ ಗಂಟಿಹೊಳೆ ಅಧ್ಯಕ್ಷತೆ ವಹಿಸಿದ್ದರು. ವಿ. ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಅಶೋಕ್ ಕುಮಾರ್ ಕೊಡವೂರು, ಮೋಹನ್ ಪೂಜಾರಿ, ಬಾಬು ಶೆಟ್ಟಿ ಗಿರೀಶ್ ಬೈಂದೂರು, ರಾಜುಪೂಜಾರಿ ಮುಂತಾದವರು ಉಪಸ್ಥಿತರಿದ್ದರು.

Exit mobile version