ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ ಎಂಬಿಎ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು.
ಈ ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಶಿಸ್ತು ಹಾಜರಾತಿ ಭವಿಷ್ಯದ ವೃತ್ತಿ ಅವಕಾಶಗಳ ಕುರಿತು ಚರ್ಚಿಸಲಾಯಿತು. ಎಂಬಿಎ ಮುಖ್ಯಸ್ಥೆ ಡಾ. ಸುಚಿತ್ರಾ ಪೂಜಾರಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಪರಿಚಯವನ್ನು ನೀಡಿದರು.

ತರಗತಿ ಉಪನ್ಯಾಸಕರಾದ ತಿಲಕಲಕ್ಷ್ಮೀ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಕುರಿತು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಎಂಬಿಎ, ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕಿ ನಾಗವೇಣಿ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.