ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ವಿದ್ಯಾರ್ಥಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗಲು ಸಿದ್ದಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ತಂದೆಯ ಜತೆಯಲ್ಲಿ ಬೈಕಿನಲ್ಲಿ ಕುಳಿತಿರುವಾಗ ಟಿಪ್ಪರ್ ಚಾಲಕ ಅತೀ ವೇಗವಾಗಿ ಬಂದು ಬೈಕಿಗೆ ಢಿಕ್ಕಿ ಹೊಡೆದಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿದ್ದಾಪುರ ಕೆಳಪೇಟೆಯ ಮಕ್ಕಿಮನೆ ರಾಘವೇಂದ್ರ ಪೂಜಾರಿ (38) ಅವರು ತಂದೆ ಕೃಷ್ಣ ಪೂಜಾರಿ. ಅವರನ್ನು ತನ್ನ ಬೈಕ್‌ನಲ್ಲಿ ಮನೆಯಿಂದ ಕುಳ್ಳಿರಿಸಿಕೊಂಡು ಬಂದು ಶಾಲೆಯ ಬಳಿ ನಿಂತುಕೊಂಡಿದ್ದರು. ಆ ಸಂದರ್ಭದಲ್ಲಿ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡರು. ಗಂಭೀರವಾಗಿ ಗಾಯಗೊಂಡ ಕೃಷ್ಣ ಪೂಜಾರಿ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

