Kundapra.com ಕುಂದಾಪ್ರ ಡಾಟ್ ಕಾಂ

ಸಹಕಾರಿಗಳ ಕ್ರೀಡಾಮೃತ 2025: ವಾಲಿಬಾಲ್ ಪಂದ್ಯಾಟದಲ್ಲಿ ಖಂಬದಕೋಣೆ ಸೊಸೈಟಿಗೆ ದ್ವಿತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಅವಿಭಜಿತ ಕುಂದಾಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗಳಿಗೆ ಏರ್ಪಡಿಸಿದ ವಾಲಿಬಾಲ್ ಪಂದ್ಯಾಟದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ದ್ವಿತೀಯ ಸ್ಥಾನ ಗಳಿಸಿದೆ.

ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘ ಪ್ರಥಮ ಸ್ಥಾನ ಗಳಿಸಿದೆ. ಪಂದ್ಯಾಟದ ಉದ್ಘಾಟನೆಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ ಹೆಗ್ಡೆ ಉದ್ಘಾಟಿಸಿದರು. ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾದ ಎಸ್ ಪ್ರಕಾಶಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಕೆದೂರು ಸದಾನಂದ ಶೆಟ್ಟಿ, ಮಾನಂಜೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರದೀಪ ಯಡಿಯಾಳ ಉಪಸ್ಥಿತರಿದ್ದರು. ಕೃಷಿ ಪತ್ತಿನ ನೌಕರರ ಸಂಘದ ಅಧ್ಯಕ್ಷರಾದ ವಿಶ್ವೇಶ್ವರ ಐತಾಳ್ ಸ್ವಾಗತಿಸಿ ಕಾರ್ಯದರ್ಶಿ ಕೀರ್ತಿ ಕುಮಾ‌ರ್ ಶೆಟ್ಟಿ ವಂದಿಸಿದರು.

Exit mobile version