Site icon Kundapra.com ಕುಂದಾಪ್ರ ಡಾಟ್ ಕಾಂ

ಖಂಬದಕೋಣೆಯಲ್ಲಿ ರಸ್ತೆ ಅಪಘಾತ: ಬೈಕ್‌ ಸವಾರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಕ್‌ ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬುಧವಾರ ಅಪರಾಹ್ನದ ವೇಳೆ ತಾಲೂಕಿನ ಖಂಬದಕೋಣೆ ರಾ.ಹೆ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಬೈಕ್ ಸವಾರನನ್ನು ಉಪ್ಪುಂದ ನಿವಾಸಿ ಭುವನ್ (19) ಎಂದು ಗುರುತಿಸಲಾಗಿದೆ. ಹಿಂಬದಿ ಸವಾರ ಉಪ್ಪುಂದ ಮೂಲದ ಮಧುಸೂಧನ್ ಗಂಭೀರ ಗಾಯಗೊಂಡಿದ್ದಾರೆ.

ಭುವನ್ ಹಾಗೂ ಮಧುಸೂಧನ್ ಅವರು ಬೈಕಿನಲ್ಲಿ ಕುಂದಾಪುರ ಕಡೆಯಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಖಂಬದಕೋಣೆಯಲ್ಲಿ ಬರುತ್ತಿದ್ದ ವೇಳೆ ಟಾಟಾ ಏಸ್ ವಾಹನವೊಂದು ಹೆದ್ದಾರಿಯ ಡಿವೈಡರ್‌ನಲ್ಲಿ ಏಕಾಏಕಿ ಯೂಟರ್ನ್ ತೆಗೆದುಕೊಂಡಿದ್ದು, ಇದರಿಂದ ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಢಿಕ್ಕಿಯಿಂದ ರಸ್ತೆಗೆಸೆಯಲ್ಪಟ್ಟ ಪರಿಣಾಮ ಭುವನ್ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಶಿವಕುಮಾರ್, ಪಿಎಸ್‌ಐ ಸುನೀಲ್ ಕುಮಾ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version