Site icon Kundapra.com ಕುಂದಾಪ್ರ ಡಾಟ್ ಕಾಂ

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯ ವತಿಯಿಂದ 2026-27 ನೇ ಸಾಲಿನ ಉದ್ಯೋಗಾದಾರಿತ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ (ಡಿ.ಪಿ.ಟಿ) ಹಾಗೂ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ) – 3 ವರ್ಷ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರು ಹಾಗೂ ಹಾಜರಾಗುವವರು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತರು ಆನ್‌ಲೈನ್ ರಿಜಿಸ್ಟ್ರೇಷನ್ ಲಿಂಕ್ https://cipet26.onlineregistrationform.org/CIPET/  ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0821-2510618, ಮೊ.ನಂ: 9480253024, 9791431827 ಅಥವಾ  ವೆಬ್‌ಸೈಟ್  www.cipet.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version