Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಶೇ.50ರ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಉಡುಪಿ:
ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ  ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‌ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಾಧಿಕಾರದ ಆಡಳತಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version