ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಜಾಗೃತರಾಗಿ ಕಾಪಾಡಿಕೊಳ್ಳಿ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ ಹೇಳಿದರು.
ಅವರು ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ ಸಾಲಿಗ್ರಾಮ ಇಲ್ಲಿ ಯೆನೆಪೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ – ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರ ಬಗ್ಗೆ ಗೆಳೆಯರ ಬಳಗಕ್ಕೆ ಅಗಾಧ ಅಭಿಮಾನದ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದಾರೆ ಇದು ಶ್ಲಾಘನಾರ್ಹ ಕಾರ್ಯ ಎಂದರು.

ಸಭೆಯ ಅಧ್ಯಕ್ಷತೆಯನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಿ ಸ್ವಾಗತಿಸಿದರು. ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲಾ ಆಚಾರ್ಯ ಶುಭಾಶಂಸನೆಗೈದರು
ಮುಖ್ಯ ಅತಿಥಿಗಳಾಗಿ ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಕಿವಿ, ಮೂಗು, ಗಂಟಲು ವಿಭಾಗದ ಪ್ರಾಧ್ಯಾಪಕ ಡಾ. ಗಂಗಾಧರ ಸೋಮಯಾಜಿ ಕೆ. ಎಸ್, ಪ್ರಾಥಮಿಕ ಆರೋಗ್ಯ ಕೇಂದ್ರ, ಸಾಸ್ತಾನ ಇದರ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಹಾಗೂ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇಲ್ಲಿನ ಕೀಲು ಮೂಳೆ ಸ್ನಾಯು ಚಿಕಿತ್ಸಾ ವಿಭಾಗ ಮುಖ್ಯಸ್ಥ ಡಾ| ಜನಾರ್ದನ ಐತಾಳ, ಯೆನೆಪೋಯ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ ಸುಶ್ಮಿತಾ, ಬಳಗದವರಾದ ಕೆ. ಜಗದೀಶ ಆಚಾರ್ಯ, ಕೆ. ಶ್ರೀಪತಿ ಆಚಾರ್ಯ, ಕೆ. ರಾಘವೇಂದ್ರ, ಕೆ. ಶೀನ, ಕೆ. ತಮ್ಮಯ್ಯ, ಕೆ. ರಘು ಭಂಡಾರಿ, ಕೆ. ಉದಯ ಐತಾಳ, ಕೆ. ಶ್ರೀಕಾಂತ ಐತಾಳ ಹಾಗೂ ನ್ಯೂ ಕಾರ್ಕಡ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 170 ಜನ ಇದರ ಪ್ರಯೋಜನ ಪಡೆದರು.
ಕಾರ್ಯಕ್ರಮವನ್ನು ಬಳಗದ ಉಪಾಧ್ಯಕ್ಷ ಶಶಿಧರ ಮಯ್ಯ ನಿರೂಪಿಸಿ, ಕಾರ್ಯದರ್ಶಿ ನಾಗರಾಜ ಉಪಾಧ್ಯಾ ವಂದಿಸಿದರು.