ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ತಮ್ಮ ಪ್ರದೇಶ ಅಭಿವೃದ್ಧಿ ನಿಧಿ ಅಡಿಯಲ್ಲಿ ಮಹೇಂದ್ರ ಕಂಪನಿಯ ಬೊಲೆರೋ ಜೀಪನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಸೋಮವಾರ ಹಸ್ತಾಂತರಿಸಿದರು.

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಶಾಸಕ ಕೊಡ್ಗಿ ಅವರು, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಮ್ ಶಂಕರ್, ಐಪಿಎಸ್ ಅವರಿಗೆ ಜೀಪಿನ ಕೀ ಯನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಿಮ್ಮಪ್ಪ ಗೌಡ, ಪೊಲೀಸ್ ಉಪಾಧೀಕ್ಷಕರು, ಡಿಎಆರ್ ಉಡುಪಿ, ರವಿ ಕುಮಾರ್, ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಹಾಯಕ ಆಡಳಿತ ಅಧಿಕಾರಿಯವರಾದ ಗೋಪಾಲ್, ಪೊಲೀಸ್ ಉಪನಿರೀಕ್ಷಕರುಗಳಾದ ಹರೀಶ್, ಸುಧಾರಾಣಿ ಮೊದಲಾದವರು ಉಪಸ್ಥಿತರಿದ್ದರು.