Site icon Kundapra.com ಕುಂದಾಪ್ರ ಡಾಟ್ ಕಾಂ

ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರದಿಂದ ನೆರಳಕಟ್ಟೆ ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸಿಗೆ, ತಲ್ಲೂರು ಕಡೆ ಬರುವ ಟಿಪ್ಪರ್‌ ಡಿಕ್ಕಿಯಾದ ಪರಿಣಾಮ ಬಸ್‌ ಜಖಂಗೊಂಡು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ತಲ್ಲೂರು – ನೇರಳಕಟ್ಟೆಯ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ. ಅಪಘಾತದಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಎಲ್ಲರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಟಿಪ್ಪರ್ ಚಾಲಕ ರಾಘವೇಂದ್ರ ಎಂಬುವವರು ತನ್ನ ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ನೇರಳಕಟ್ಟೆಯ ಶೆಟ್ರಕಟ್ಟೆ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಎದುರುಗಡಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಬಲಬದಿ ಜಖಂ ಆಗಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಅದರಲ್ಲಿ 3 ಜನ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ವಿದ್ಯಾರ್ಥಿಗಳ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿದ್ದಾರೆ. ಓರ್ವ ವಿದ್ಯಾರ್ಥಿ ಅಪಾಯದಿಂದ ಪಾರಾಗಿದ್ದಾರೆ. ಉಳಿದ ಗಾಯಾಳುಗಳನ್ನು ಕುಂದಾಪುರದ ಸರಕಾರಿ ಹಾಗೂ ಆದರ್ಶ ಅಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ 7 ಜನ ವಿದ್ಯಾರ್ಥಿಗಳಾಗಿದ್ದಾರೆ. /ಕುಂದಾಪ್ರ ಡಾಟ್‌ ಕಾಂ/

ಟಿಪ್ಪರ್‌ ಚಾಲಕ ರಾಘವೇಂದ್ರನು ಚಿನ್ಮಯಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ. ಮಣಿಪಾಲ ಆಸ್ಪತ್ರೆಗೆ ಎಸ್ಪಿ ಹರಿರಾಂ ಶಂಕರ್‌ ಭೇಟಿ ನೀಡಿ ವಿದ್ಯಾರ್ಥಿಗಳ ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದವರು ತಿಳಿಸಿದ್ದಾರೆ.

Exit mobile version