ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಪುಸ್ತಕಗಳ ನೋಂದಣಿ ಕಾಯಿದೆ ಅನ್ವಯ 2025ನೇ ಸಾಲಿನಲ್ಲಿ ಮುದ್ರಿಸಿ ಪ್ರಕಟಿಸಿದ ಮೊದಲ ಆವೃತ್ತಿಯ ಪುಸ್ತಕಗಳ ಮೂರು ಪ್ರತಿಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಆಯ್ಕೆಗಾಗಿ ಮೊದಲ ಆವೃತ್ತಿ ಪುಸ್ತಕ ಆಹ್ವಾನಿಸಲಾಗಿದೆ.
2025 ನೇ ಸಾಲಿನಲ್ಲಿ ರಾಜ್ಯದಲ್ಲಿ ಪ್ರಥಮ ಮುದ್ರಣಗೊಂಡು ಪ್ರಕಟಗೊಳ್ಳುವ ಯಾವುದೇ ಭಾಷೆಯ ಪುಸ್ತಕಗಳಲ್ಲಿ ಪ್ರತಿ ಶೀರ್ಷಿಕೆಯ ಮೂರು ಪ್ರತಿಗಳನ್ನು ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಸಲ್ಲಿಸಿ ಜನವರಿ 31 ರ ಸಂಜೆ 5.30ರ ಒಳಗಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿಯಾದ ಪುಸ್ತಕಗಳನ್ನು ಮಾತ್ರ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪರಿಗಣಿಸಲಾಗುವುದು. ಅಂತಿಮ ದಿನಾಂಕದ ನಂತರ ನೋಂದಣಿಯಾಗುವ ಪುಸ್ತಕಗಳನ್ನು ಆಯ್ಕೆಗಾಗಿ ಪರಿಗಣಿಸಲಾಗುವುದಿಲ್ಲ.
ನೋಂದಣಿಗಾಗಿ ನಿಗಧಿತ ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ dpl.karnataka.gov.in, ಆಯುಕ್ತರ ಕಚೇರಿ ದೂ.ಸಂಖ್ಯೆ: 080-22864990, 22867358, ರಾಜ್ಯ ಕೇಂದ್ರ ಗ್ರಂಥಾಲಯ ದೂ.ಸಂಖ್ಯೆ: 080-22212128 ಅಥವಾ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲಾ ಕೇಂದ್ರ ಗ್ರಂಥಾಲಯ, ಅಜ್ಜರಕಾಡು, ಉಡುಪಿ ದೂ.ಸಂಖ್ಯೆ: 0820-2523438 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

