ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಇಲಾಖೆ ಶಾಂತಿವನ ಟ್ರಸ್ಟ್ ರಿ. ಅವರು ನಡೆಸಿದ ಜ್ಞಾನ ಪಥ ಪುಸ್ತಕಾಧಾರಿತ ರಾಜ್ಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಸಮೃದ್ಧಿ ವಿ. ಪೂಜಾರಿ ತೃತೀಯ ಸ್ಥಾನ ಪಡೆದಿರುತ್ತಾಳೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

