Site icon Kundapra.com ಕುಂದಾಪ್ರ ಡಾಟ್ ಕಾಂ

ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹಂಗಳೂರು ರಾಷ್ಟ್ರೀಯ ಹೆದ್ದಾರಿ-66ರ ಡಿವೈಡರ್ ಬಳಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಕೋಟೇಶ್ವರದ ಅಂಕದಕಟ್ಟೆ ಬಳಿ ವಾಸವಿದ್ದ ಕೃಷ್ಣಮೂರ್ತಿ ಅಡಿಗ (57) ಅವರು ಮೃತ ವ್ಯಕ್ತಿ.

ಕೃಷ್ಣಮೂರ್ತಿ ಅವರು ಅಡುಗೆ ಕೆಲಸ ಮಾಡಿಕೊಂಡಿದ್ದರು. ತಮ್ಮ ಹೊಸ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಮನೆಯಿಂದ ಹೊರಟವರು ಸರ್ವೀಸ್ ರಸ್ತೆಯಿಂದ ಹೆದ್ದಾರಿಗೆ ತಿರುವು ಪಡೆದಾಗ, ಕುಂದಾಪುರ ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಟಿಪ್ಪರ್ ಗುದ್ದಿದ್ದು ರಸ್ತೆಗೆಸೆಯಲ್ಪಟ್ಟ ಅವರ ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಆರೋಪಿ ಟಿಪ್ಪರ್ ಚಾಲಕ ಶಶಾಂಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ‌.

ಕೃಷ್ಣಮೂರ್ತಿ ಅವರು ಮೂಲತಃ ಆಲೂರಿನವರಾಗಿದ್ದು, ಕೋಟೇಶ್ವರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಕುಂದಾಪುರ ನಗರ ಠಾಣೆ ಪೊಲೀಸ್, ಸಂಚಾರ ಠಾಣೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version