ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಸ್ವ ಸಹಾಯ ಸಂಘಗಳಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ಇತ್ತೀಚಿಗೆ ಜರುಗಿತು.
ರುಡ್ಸೆಟ್ ಸಂಸ್ಥೆ ಬ್ರಹ್ಮಾವರ ಇದರ ನಿರ್ದೇಶಕ ಡಾ. ಬೊಮ್ಮಯ್ಯ ರುಡ್ಸೆಟ್ ಸಂಸ್ಥೆ ಅಲ್ಲಿ ದೊರೆಯುವ ತರಬೇತಿ ಹಾಗೂ ಉಪಯೋಗದ ಬಗ್ಗೆ ಮಾಹಿತಿ ತಿಳಿಸಿದರು. ರಾಜ್ಯ ಗುಪ್ತಚರ ಉಡುಪಿ ವಿಭಾಗದ ಮಹಿಳಾ ಪೋಲಿಸ್ ಕಾನ್ಸ್‌ಟೇಬಲ್ ಅಪೂರ್ವ ಅವಿನಾಶ್ ಪೂಜಾರಿ ಪೊಲೀಸ್ ಇಲಾಖೆ ಬಗ್ಗೆ ಅದರ ಕಾನೂನು ವ್ಯವಸ್ಥೆ ಬಗ್ಗೆ ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಲೀಲಾವತಿ ಗಂಗಾಧರ್ ಪೂಜಾರಿ ಹಾಗೂ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ರವಿಕಿರಣ್ ಪೂಜಾರಿ ಉಪಸ್ಥಿತರಿದ್ದರು. ಸಂಘದ ಉಷಾ ಗಣೇಶ್ ಪೂಜಾರಿ ಸ್ವಾಗತಿಸಿ, ಸೀಮಾ ವಿಜಯ್ ಪೂಜಾರಿ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಸಂಘಟಕ ಸುರೇಶ್ ಪಾಂಡೇಶ್ವರ ಕಾರ್ಯಕ್ರಮ ಸಂಯೋಜಿಸಿದರು.